Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:3 - ಕನ್ನಡ ಸತ್ಯವೇದವು C.L. Bible (BSI)

3 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:3
23 ತಿಳಿವುಗಳ ಹೋಲಿಕೆ  

ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.


ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II


ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಇದು ನಿಮಗೆ ಪೂರ್ತಿ ದುಡಿಮೆ ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಿರಬೇಕು; ನಿಮಗಿದು ಶಾಶ್ವತನಿಯಮ.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು