Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:4 - ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಆಹಾರಕ್ಕಾಗಿ ಹಸಿವೆಯಿಂದಿಲ್ಲ. ನೀವು ಜಗಳ, ವಾಗ್ವಾದಕ್ಕಾಗಿ ಹಸಿದಿದ್ದೀರಿ. ನಿಮ್ಮ ಕ್ರೂರ ಕೈಗಳಿಂದ ಜನರನ್ನು ಹೊಡೆಯಲು ಹಸಿವೆಯಿಂದಿದ್ದೀರಿ. ನೀವು ಉಪವಾಸ ಮಾಡುವಾಗ ನನಗಾಗಿ ಮಾಡುವದಿಲ್ಲ. ನನ್ನನ್ನು ಸ್ತುತಿಸಲು ನೀವು ನಿಮ್ಮ ಸ್ವರವನ್ನು ಉಪಯೋಗಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:4
16 ತಿಳಿವುಗಳ ಹೋಲಿಕೆ  

ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.


ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.


ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು