ಯೆಶಾಯ 58:5 - ಕನ್ನಡ ಸತ್ಯವೇದವು C.L. Bible (BSI)5 ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ? ಅಧ್ಯಾಯವನ್ನು ನೋಡಿ |