Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:6 - ಕನ್ನಡ ಸತ್ಯವೇದವು C.L. Bible (BSI)

6 “ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:6
18 ತಿಳಿವುಗಳ ಹೋಲಿಕೆ  

ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.


ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು.


ಮರಣಕ್ಕೆ ಒಯ್ಯಲ್ಪಟ್ಟವನನ್ನು ಬಿಡಿಸಲು ಯತ್ನಿಸು; ಕೊಲೆಗೆ ಗುರಿಯಾದವನನ್ನು ತಪ್ಪಿಸಲು ಯತ್ನಿಸು.


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.


ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಉರಿಯುತ್ತಾ ಇದೆ!” ಎಂದನು.


ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.


:ಸತ್ಯಾನುಸಾರ ನ್ಯಾಯತೀರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು