Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:7 - ಕನ್ನಡ ಸತ್ಯವೇದವು C.L. Bible (BSI)

7 ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:7
38 ತಿಳಿವುಗಳ ಹೋಲಿಕೆ  

“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.


ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು.


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.


ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.


ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.


“ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.


ಮರಣಕ್ಕೆ ಒಯ್ಯಲ್ಪಟ್ಟವನನ್ನು ಬಿಡಿಸಲು ಯತ್ನಿಸು; ಕೊಲೆಗೆ ಗುರಿಯಾದವನನ್ನು ತಪ್ಪಿಸಲು ಯತ್ನಿಸು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು