Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:8 - ಕನ್ನಡ ಸತ್ಯವೇದವು C.L. Bible (BSI)

8 “ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:8
27 ತಿಳಿವುಗಳ ಹೋಲಿಕೆ  

ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.


ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.


ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು