Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:1
17 ತಿಳಿವುಗಳ ಹೋಲಿಕೆ  

“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.


ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.


ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು