Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:10 - ಕನ್ನಡ ಸತ್ಯವೇದವು C.L. Bible (BSI)

10 ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕುರುಡರ ಹಾಗೆ ಗೋಡೆಯನ್ನು ತಡವರಿಸುತ್ತೇವೆ. ಕಣ್ಣಿಲ್ಲದವರ ಹಾಗೆ ಮುಟ್ಟಿ ನೋಡುತ್ತೇವೆ. ಮಧ್ಯಾಹ್ನದಲ್ಲಿ ರಾತ್ರಿಯಂತೆ ಎಡವುತ್ತೇವೆ. ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:10
16 ತಿಳಿವುಗಳ ಹೋಲಿಕೆ  

ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಎಷ್ಟೋ ದಿನಗಳ ಹಿಂದೆ ಸತ್ತವರ ಜೊತೆಯಲ್ಲಿ ನನ್ನನ್ನು ಇರಿಸಿದ್ದಾನೆ ಆ ಕಾರ್ಗತ್ತಲಲ್ಲಿ.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು