Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:16
19 ತಿಳಿವುಗಳ ಹೋಲಿಕೆ  

ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.


ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ.


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು