Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:3 - ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:3
31 ತಿಳಿವುಗಳ ಹೋಲಿಕೆ  

ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.


ನಿಷ್ಪ್ರಯೋಜಕವಾದ ಹಾಗೂ ಮೋಸದ ಮಾತುಗಳಲ್ಲಿ ನೀವು ಭರವಸೆ ಇಟ್ಟಿದ್ದೀರಿ.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು