Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:6 - ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:6
31 ತಿಳಿವುಗಳ ಹೋಲಿಕೆ  

ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.


ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.


ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.


ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.


ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ : ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II


ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ ನಿಮ್ಮ ಮಡದಿಗೆ ದ್ರೋಹವೆಸಗದಿರಿ.


ಅದರ ಮಧ್ಯೆಯೇ ಇವೆ ವಿನಾಶಕರ ಶಕ್ತಿಗಳು I ಅದರ ಬೀದಿಬಿಟ್ಟು ತೊಲಗವು ಮೋಸ ವಂಚನೆಗಳು II


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು