Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:7
26 ತಿಳಿವುಗಳ ಹೋಲಿಕೆ  

ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.


ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು