Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:1 - ಕನ್ನಡ ಸತ್ಯವೇದವು C.L. Bible (BSI)

1 ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಉಜ್ಜೀಯನು ಕಾಲವಾದ ವರುಷದಲ್ಲಿ ಕರ್ತನು ಉನ್ನತೋನ್ನತ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:1
38 ತಿಳಿವುಗಳ ಹೋಲಿಕೆ  

ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಶೋಭೆ I ಭೂಮಂಡಲದೊಳು ಹಬ್ಬಿ ಹರಡಲಿ ನಿನ್ನಾ ಪ್ರತಿಭೆ II


ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು.


ಆ ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರು.


ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.


ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.


ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು