Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:10 - ಕನ್ನಡ ಸತ್ಯವೇದವು C.L. Bible (BSI)

10 ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:10
34 ತಿಳಿವುಗಳ ಹೋಲಿಕೆ  

ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.


ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.


ಅನಂತರ ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆಮಾಡಿದರು: “ಮತ್ತೊಮ್ಮೆ ನೀನು ವೇಷ ಧರಿಸಿಕೊಂಡು ಮಂಕು ಕುರುಬನಂತೆ ನಟಿಸು.


ಅವನ ಇಡೀ ನಾಡಿಗೂ ಮಾಡಿದವುಗಳನ್ನೆಲ್ಲಾ ನೀವು ನೋಡಿದ್ದೀರಿ. ಮಹಾಪರಿಶೋಧನೆ, ಪವಾಡ, ಮಹತ್ಕಾರ್ಯ ಇವುಗಳನ್ನು ಕಣ್ಣಾರೆ ನೋಡಿದ್ದೀರಿ.


ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ಆದುದರಿಂದಲೇ ಸರ್ವೇಶ್ವರ ನಿಮಗೆ ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು