Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:11 - ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:11
28 ತಿಳಿವುಗಳ ಹೋಲಿಕೆ  

ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಎಲ್ಲಿಯವರೆಗೆ ಪ್ರಭು, ಎಲ್ಲಿಯವರೆಗೆ? I ದುರುಳರು ಹಿಗ್ಗುತ್ತಲೆ ಇರಬೇಕು ಹೀಗೆ? II


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.


ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನಾನು ಜೆರುಸಲೇಮಿಗು ಹಾಗುಜುದೇಯದ ಎಲ್ಲ ಊರುಗಳಿಗು ಬರಮಾಡಿದ ಕೇಡನ್ನು ನೀವೇ ನೋಡಿದ್ದೀರಿ.


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ಕೋಟೆಕೊತ್ತಲಗಳನ್ನು ಕೆಡವಿಬಿಡುವೆನು.


ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು