Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:2 - ಕನ್ನಡ ಸತ್ಯವೇದವು C.L. Bible (BSI)

2 ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:2
34 ತಿಳಿವುಗಳ ಹೋಲಿಕೆ  

ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.


ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು.


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ಪ್ರತಿಯೊಂದು ಕೆರೂಬಿಯ ರೆಕ್ಕೆಗಳು 2:2 ಮೀಟರ್ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ 4:4 ಮೀಟರ್


ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.


ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;


ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.


ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.


ಒಂದೊಂದಕ್ಕೆ ನಾಲ್ಕು ಮುಖಗಳು, ನಾಲ್ಕು ರೆಕ್ಕೆಗಳು ಇದ್ದವು.


ದೇವರಿಗೋ, ತನ್ನ ದೂತರಲ್ಲೂ ನಂಬಿಕೆಯಿಲ್ಲ ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.


ಅವನು ಅವುಗಳನ್ನು ದೇವಾಲಯದ ಗರ್ಭಗುಡಿಯಲ್ಲಿರಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆ ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆ ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿ ಇದ್ದವು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ತನ್ನ ಸೇವಕರಲ್ಲೂ ದೇವರು ನಂಬಿಕೆಯಿಡುವುದಿಲ್ಲವಲ್ಲಾ! ತನ್ನ ದೂತರ ಮೇಲೂ ಆತನು ತಪ್ಪುಹೊರಿಸುತ್ತಾನಲ್ಲಾ!


ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.


ಭಕ್ತಸಮೂಹವು ಹೊರಗೆನಿಂತು ಪ್ರಾರ್ಥನೆ ಮಾಡುತ್ತಿತ್ತು.


ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು