Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:3 - ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:3
25 ತಿಳಿವುಗಳ ಹೋಲಿಕೆ  

ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II


ಹಾಡಲಿ ಆತನ ಶ್ರೀನಾಮ ಮಹಿಮೆಗೆ II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು