ಯೆಶಾಯ 6:5 - ಕನ್ನಡ ಸತ್ಯವೇದವು C.L. Bible (BSI)5 ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು. ಅಧ್ಯಾಯವನ್ನು ನೋಡಿ |