Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:7 - ಕನ್ನಡ ಸತ್ಯವೇದವು C.L. Bible (BSI)

7 ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಬಾಯಿಗೆ ಮುಟ್ಟಿಸಿ - ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು; ನಿನ್ನ ದೋಷವು ನೀಗಿತು, ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:7
15 ತಿಳಿವುಗಳ ಹೋಲಿಕೆ  

ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು