Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:8 - ಕನ್ನಡ ಸತ್ಯವೇದವು C.L. Bible (BSI)

8 ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:8
23 ತಿಳಿವುಗಳ ಹೋಲಿಕೆ  

ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.


ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.


ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,


ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ಸೌಲ ಹಿಂದಿರುಗಿ ನನ್ನನ್ನು ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು