Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:10 - ಕನ್ನಡ ಸತ್ಯವೇದವು C.L. Bible (BSI)

10 ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು. ಅವರ ಅರಸರು ಸಹ ನಿನಗೆ ಸೇವೆಮಾಡುವರು. ಏಕೆಂದರೆ ನನ್ನ ಬೇಸರದಲ್ಲಿ ನಿನ್ನನ್ನು ಹೊಡೆದೆನು. ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:10
20 ತಿಳಿವುಗಳ ಹೋಲಿಕೆ  

ವಿದೇಶಿಯರು, ಮಂದೆ ಕಾವಲುಗಾರರಾಗುವರು ನಿಮಗೆ ಅನ್ಯ ಜನರು ಉಳುವವರೂ ತೋಟಗಾರರಾಗುವರೂ ನಿಮಗೆ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ರಾಷ್ಟ್ರಗಳ ಸಿರಿಸಂಪತ್ತನ್ನೂ ಘನಮಾನವನ್ನೂ ಅಲ್ಲಿಗೆ ತರಲಾಗುವುದು.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು