Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:11 - ಕನ್ನಡ ಸತ್ಯವೇದವು C.L. Bible (BSI)

11 ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು, ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು. ಇತರ ಜನಾಂಗಗಳ ಆಸ್ತಿ ನಿನ್ನ ಬಳಿಗೆ ತರುತ್ತಿರುವರು. ಅವರ ಅರಸರು ಸಹ ಬಂಧುಗಳಾಗಿ ನಿನ್ನ ಮೆರವಣಿಗೆಯಲ್ಲಿ ಮುನ್ನಡೆಸಿದರು ಹಗಲುರಾತ್ರಿ ಅವು ಮುಚ್ಚಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:11
11 ತಿಳಿವುಗಳ ಹೋಲಿಕೆ  

ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.


ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು