ಯೆಶಾಯ 60:13 - ಕನ್ನಡ ಸತ್ಯವೇದವು C.L. Bible (BSI)13 ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಅಧ್ಯಾಯವನ್ನು ನೋಡಿ |