Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:14 - ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:14
22 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು