ಯೆಶಾಯ 60:17 - ಕನ್ನಡ ಸತ್ಯವೇದವು C.L. Bible (BSI)17 ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿ |