Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:19 - ಕನ್ನಡ ಸತ್ಯವೇದವು C.L. Bible (BSI)

19 ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗೊಳ್ಳನು; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:19
21 ತಿಳಿವುಗಳ ಹೋಲಿಕೆ  

ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು