ಯೆಶಾಯ 60:22 - ಕನ್ನಡ ಸತ್ಯವೇದವು C.L. Bible (BSI)22 ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಚಿಕ್ಕವನಿಂದ ಒಂದು ಕುಲವಾಗುವದು, ಅಲ್ಪನಿಂದ ಬಲವಾದ ಜನಾಂಗವಾಗುವದು; ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು. ಅಧ್ಯಾಯವನ್ನು ನೋಡಿ |