Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:3 - ಕನ್ನಡ ಸತ್ಯವೇದವು C.L. Bible (BSI)

3 ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:3
43 ತಿಳಿವುಗಳ ಹೋಲಿಕೆ  

ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.


ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು