Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:4 - ಕನ್ನಡ ಸತ್ಯವೇದವು C.L. Bible (BSI)

4 ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:4
18 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಮುಂದಿನ ಸಬ್ಬತ್‍ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು.


ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಅಂದು ಜನರು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ನಿಮ್ಮ ಬಳಿಗೆ ಬಂದು ಸೇರುವರು. ಸಮುದ್ರದಿಂದ ಸಮುದ್ರದವರೆಗೂ ಪರ್ವತದಿಂದ ಪರ್ವತದವರೆಗೂ ಈಜಿಪ್ಟಿನಿಂದ ಯೂಫ್ರೆಟಿಸ್ ನದಿಯವರೆಗೂ ಚದರಿಹೋಗಿರುವ ಜನರೆಲ್ಲರು ನಿನ್ನೆಡೆಗೆ ಬರುವರು.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ನಿನ್ನ ಮರಳಿ ಕಟ್ಟುವವರು ಬರುತಿಹರು ತ್ವರೆಯಿಂದ ನಿನ್ನ ಕೆಡವಿ ಹಾಳುಮಾಡಿದವರು ಹೊರಡುತಿಹರು ನಿನ್ನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು