Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:6 - ಕನ್ನಡ ಸತ್ಯವೇದವು C.L. Bible (BSI)

6 ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:6
30 ತಿಳಿವುಗಳ ಹೋಲಿಕೆ  

ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.


ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.


ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.


ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.


ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು