Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:1 - ಕನ್ನಡ ಸತ್ಯವೇದವು C.L. Bible (BSI)

1 ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:1
55 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.


ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.


ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II


ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು