Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:10 - ಕನ್ನಡ ಸತ್ಯವೇದವು C.L. Bible (BSI)

10 ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:10
52 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.


“ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು