Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:3 - ಕನ್ನಡ ಸತ್ಯವೇದವು C.L. Bible (BSI)

3 ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:3
39 ತಿಳಿವುಗಳ ಹೋಲಿಕೆ  

ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ನಿನ್ನ ಬಟ್ಟೆಗಳು ಬೆಳ್ಳಗಿರಲಿ, ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


“ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು