Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:4 - ಕನ್ನಡ ಸತ್ಯವೇದವು C.L. Bible (BSI)

4 ಮರಳಿ ಕಟ್ಟುವರಿವರು ಪಾಳುಬಿದ್ದ ಪುರಾತನ ಮನೆಗಳನು ಮತ್ತೆ ಎಬ್ಬಿಸುವರು ಬಿದ್ದ ಹಳೆಯ ಕಟ್ಟಡಗಳನು ನೂತನಗೊಳಿಸುವರು ತಲಾಂತರದ ಹಾಳುಬೀಳು ಪಟ್ಟಣಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪುರಾತನ ಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು, ಪೂರ್ವದಲ್ಲಿ ಪಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳುಬೀಳಾದ ಪಟ್ಟಣಗಳನ್ನು ಜೀರ್ಣೋದ್ಧಾರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ, ಮುಂಚೆ ಹಾಳುಬಿದ್ದವುಗಳನ್ನು ಎಬ್ಬಿಸುವರು. ಅನೇಕ ತಲಾಂತರಗಳಿಂದ ಹಾಳಾದ ಪಟ್ಟಣಗಳನ್ನೂ, ನೂತನ ಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:4
11 ತಿಳಿವುಗಳ ಹೋಲಿಕೆ  

ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು