Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:8 - ಕನ್ನಡ ಸತ್ಯವೇದವು C.L. Bible (BSI)

8 “ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:8
34 ತಿಳಿವುಗಳ ಹೋಲಿಕೆ  

ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಯಕೋಬನಿಗೆ ರಾಜಶಾಸನವಾಗಿ ಕೊಟ್ಟುದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು II


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು