Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:10 - ಕನ್ನಡ ಸತ್ಯವೇದವು C.L. Bible (BSI)

10 ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:10
27 ತಿಳಿವುಗಳ ಹೋಲಿಕೆ  

“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.


ಇಂತೆನ್ನುವರು ಸ್ವಾಮಿ ಸರ್ವೇಶ್ವರ : ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.


ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು