Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:11 - ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಗೋ, ಯೆಹೋವನು ದೂರದೇಶಗಳವರಿಗೆ ಹೇಳುವುದೇನೆಂದರೆ, “ಚೀಯೋನಿನ ಜನರಿಗೆ ತಿಳಿಸಿರಿ: ‘ನೋಡು, ನಿನ್ನ ರಕ್ಷಕನು ಬರುತ್ತಿದ್ದಾನೆ. ತನ್ನ ಕೈಯಲ್ಲಿ ನಿನಗೆ ಪ್ರತಿಫಲವನ್ನು ತೆಗೆದುಕೊಂಡು ಬರುತ್ತಿದ್ದಾನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:11
18 ತಿಳಿವುಗಳ ಹೋಲಿಕೆ  

ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಇದನ್ನು ಕುರಿತೇ, ‘ಸಿಯೋನ್ ನಗರಿಯೇ, ಅಂಜಬೇಡ. ಇಗೋ ನೋಡು; ಹೇಸರಗತ್ತೆಯನ್ನೇರಿ ಬರುತ್ತಿರುವನು ನಿನ್ನ ಅರಸನು’ ಎಂದಿದೆ ಪವಿತ್ರಗ್ರಂಥ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ನಿಮ್ಮಲ್ಲಿ ಯಾರಾದರು ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟಿದ್ದರೂ ಅಲ್ಲಿಂದ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ಕರೆದುತರುವರು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು