Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:4 - ಕನ್ನಡ ಸತ್ಯವೇದವು C.L. Bible (BSI)

4 “ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:4
32 ತಿಳಿವುಗಳ ಹೋಲಿಕೆ  

ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.


ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು