Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:5 - ಕನ್ನಡ ಸತ್ಯವೇದವು C.L. Bible (BSI)

5 ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:5
12 ತಿಳಿವುಗಳ ಹೋಲಿಕೆ  

ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.


ಬಾ, ವಧುವೆ, ಲೆಬನೋನಿನಿಂದ ಬಾ, ನನ್ನೊಡನೆ ಲೆಬನೋನಿನಿಂದ ಇಳಿದು ಬಾ ಅಮಾನದ ತುದಿಯಿಂದ ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.


ನನ್ನವಳನ್ನಾಗಿ ಮಾಡಿಕೊಳ್ಳುವೆನು ನಿನ್ನನ್ನು ಅನವರತ ನಿನ್ನ ವರಿಸುವೆನು ಕರುಣೆಯಿಂದ, ನೀತಿನ್ಯಾಯದಿಂದ, ನಿಶ್ಚಲ ಪ್ರೀತಿಯಿಂದ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.


ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು