Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:8 - ಕನ್ನಡ ಸತ್ಯವೇದವು C.L. Bible (BSI)

8 ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:8
16 ತಿಳಿವುಗಳ ಹೋಲಿಕೆ  

ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು