Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:9 - ಕನ್ನಡ ಸತ್ಯವೇದವು C.L. Bible (BSI)

9 ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ ಅದನ್ನು ಉಂಡು ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷೆಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:9
13 ತಿಳಿವುಗಳ ಹೋಲಿಕೆ  

ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ಜನರು ಅಲ್ಲೇ ಮನೆಮಾಡಿ ನಿವಾಸಮಾಡುವರು; ತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು.


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ಪ್ರಾಕಾರದಲ್ಲಿನ ನಿಲವು ಕಂಬದವರೆಗೆ ನಿಲವುಕಂಬಗಳನ್ನು ಅಳತೆಮಾಡಲು ಮೂವತ್ತು ಮೀಟರ್ ಇದ್ದವು. ಹೆಬ್ಬಾಗಿಲನ್ನು ಸುತ್ತುಮುತ್ತಲು ಅಳೆದನು.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.


ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು