Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:15 - ಕನ್ನಡ ಸತ್ಯವೇದವು C.L. Bible (BSI)

15 ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:15
33 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ಸರ್ವಶಕ್ತನಾದ ದೇವರೇ, ಮರಳಿ ಮುಖತೋರಿಸು I ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು II


ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II


ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II


ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು