Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:18 - ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:18
21 ತಿಳಿವುಗಳ ಹೋಲಿಕೆ  

ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು