Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:19 - ಕನ್ನಡ ಸತ್ಯವೇದವು C.L. Bible (BSI)

19 ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಲವರು ನಿನ್ನನ್ನು ಅನುಸರಿಸುವದಿಲ್ಲ. ಅವರು ನಿನ್ನ ಹೆಸರಿನಿಂದ ಕರೆಯಲ್ಪಡುವದಿಲ್ಲ. ನಾವು ಅವರಂತೆ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ. ಅವರ ಮೇಲೆ ನೀವು ದೊರೆತನ ಮಾಡಲಿಲ್ಲ. ಅವರು ನಿಮ್ಮ ಹೆಸರನ್ನು ಧರಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:19
19 ತಿಳಿವುಗಳ ಹೋಲಿಕೆ  

ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.


ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ.


ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು.


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು