Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಉಡುಪೇತಕೆ ಕೆಂಪಗಿದೆ? ನಿನ್ನ ಬಟ್ಟೆಗಳೇಕೆ ದ್ರಾಕ್ಷೆಯನು ತುಳಿಯುವವನ ಬಟ್ಟೆಯ ಹಾಗಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷೆಯನ್ನು ತುಳಿಯುವವನ ಬಟ್ಟೆಯ ಹಾಗಿರುವದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನ್ನ ಬಟ್ಟೆ ಕಡುಕೆಂಪಾಗಲು ಕಾರಣವೇನು? ದ್ರಾಕ್ಷಿಹಣ್ಣುಗಳನ್ನು ತುಳಿದು ರಸ ತೆಗೆಯುವವನ ಬಟ್ಟೆಯಂತೆ ಅವು ಇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ವಸ್ತ್ರಗಳು ಏಕೆ ಕೆಂಪಾದವು? ನಿನ್ನ ಬಟ್ಟೆಗಳು ಏಕೆ ದ್ರಾಕ್ಷಿಯನ್ನು ತುಳಿಯುವವನ ಹಾಗಿವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:2
7 ತಿಳಿವುಗಳ ಹೋಲಿಕೆ  

ಆತನು ಧರಿಸಿದ್ದ ಉಡುಪು ರಕ್ತಪ್ರೋಕ್ಷಿತವಾಗಿತ್ತು. ಆತನಿಗೆ ‘ದೇವರ ವಾಕ್ಯ’ ಎಂದು ಹೆಸರು.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು.


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು