Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:5 - ಕನ್ನಡ ಸತ್ಯವೇದವು C.L. Bible (BSI)

5 ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣ ಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು. ಆಗ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನು ಉಂಟುಮಾಡಿತು. ನನ್ನ ಕೋಪವೇ ನನಗೆ ಆಧಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:5
19 ತಿಳಿವುಗಳ ಹೋಲಿಕೆ  

ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು