Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:10 - ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:10
22 ತಿಳಿವುಗಳ ಹೋಲಿಕೆ  

ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


“ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು