Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:12 - ಕನ್ನಡ ಸತ್ಯವೇದವು C.L. Bible (BSI)

12 ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:12
12 ತಿಳಿವುಗಳ ಹೋಲಿಕೆ  

ನನ್ನನ್ನೇ ತಡೆಹಿಡಿದೆನು : ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು