Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:3 - ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ನಿರೀಕ್ಷೆಗೆ ಮೀರಿದ ಭಯಂಕರಕೃತ್ಯಗಳನ್ನು ನಡಿಸಿ ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! ಹೌದು, ನೀನು ಇಳಿದು ಬಂದು ಪರ್ವತಗಳು ನಿನ್ನ ದರ್ಶನದಿಂದ ಅಲುಗಿದರೆ ಎಷ್ಟೋ ಲೇಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:3
16 ತಿಳಿವುಗಳ ಹೋಲಿಕೆ  

ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು