Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:4 - ಕನ್ನಡ ಸತ್ಯವೇದವು C.L. Bible (BSI)

4 ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:4
36 ತಿಳಿವುಗಳ ಹೋಲಿಕೆ  

ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶವೊಂದು ಹುಟ್ಟೀತೆ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೆ? ಆದರೂ ಪ್ರಸವವೇದನೆ ತೊಡಗಿದೊಡನೆ ಸಿಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.”


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


“ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”


ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು